ಕಲ್ಲಗುಪ್ಪೆ ಶಾಲೆಯಲ್ಲಿ ಗಣರಾಜ್ಯೋತ್ಸವ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಗುಪ್ಪೆಯಲ್ಲಿ 76ನೇ ಗಣರಾಜೋತ್ಸವ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ವಿಜಯ ಶೆಟ್ಟಿ ವಹಿಸಿದ್ದರು. ಅತಿಥಿಗಳಾಗಿ ಇಸ್ರೊ ನಿವೃತ್ತ ವಿಜ್ಞಾನಿ ಜನಾರ್ದನ್ ಇಡ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಅಧ್ಯಕ್ಷರು, ಅತಿಥಿಗಳು ಧ್ವಜಾರೋಹಣಗೈದರು. ಗಣ್ಯರು ಗಣರಾಜ್ಯೋತ್ಸವ ದಿನದ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಮುಖ್ಯಶಿಕ್ಷಕ ಮನೋಹರ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕಿ ವನಿತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸುನಂದಾ ಧನ್ಯವಾದವಿತ್ತರು. ಶಿಕ್ಷಕಿಯರಾದ ಅಶ್ವಿನಿ, ಚೈತ್ರಾ, ಮಂಜುಳಾ ಸಹಕರಿಸಿದ್ದರು.



















































































error: Content is protected !!
Scroll to Top