ಕಾರ್ಕಳ : ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹೂಡಿಕೆ ಮಾಡಿದ್ದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ.
ಆರೋಪಿತರಾದ ಅಜಯ್ ಹಾಗೂ ಇತರರು 2024ರ ಆ. 6ರಂದು ರಾಜೇಶ್ವರಿ ಎಂಬವರ ಮೊಬೈಲ್ ನಂಬ್ರಕ್ಕೆ ವಾಟ್ಸಾಪ್ ಕಾಲ್ ಮಾಡಿ ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಬೇರೆ ಬೇರೆ ಖಾತೆಯಿಂದ 66,27,634/- ರೂ. ಹಣವನ್ನು ಆರೋಪಿತರ ಬೇರೆ ಬೇರೆ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. ಆದರೆ, ಹಾಕಿದ ಹಣವನ್ನು ವಾಪಾಸು ನೀಡದೆ ಮೋಸ ಮಾಡಿದ್ದಾರೆ. ಈ ಬಗ್ಗೆ ರಾಜೇಶ್ವರಿ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹೂಡಿಕೆ – ಮಹಿಳೆಗೆ ಲಕ್ಷಾಂತರ ರೂ. ವಂಚನೆ





































