ಸಚಿನ್‌ ತೆಂಡೂಲ್ಕರ್‌ಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಚಿನ್‌ ಅವರ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಕರ್ನಲ್ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ. 2023ನೇ ಸಾಲಿನಲ್ಲಿ ಈ ಪ್ರಶಸ್ತಿ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಮತ್ತು ಮಾಜಿ ವಿಕೆಟ್ ಕೀಪರ್ ಫಾರೂಕ್ ಎಂಜಿನಿಯ‌ರ್ ಅವರಿಗೆ ಲಭಿಸಿತ್ತು.

ಸಚಿನ್ ಭಾರತದ ಪರ 1 ಟಿ20, ದಾಖಲೆಯ 200 ಟೆಸ್ಟ್ ಮತ್ತು 463 ಏಕದಿನ ಅಂದರೆ ಒಟ್ಟು 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ಟೆಸ್ಟ್‌ನಲ್ಲಿ 15921 ರನ್, ಏಕದಿನದಲ್ಲಿ 18426 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಸಚಿನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕ ಸಿಡಿಸಿದ ದಾಖಲೆ ಕೂಡ ಇದೆ. ಸಚಿನ್ ಈ ಹಿಂದೆ ಭಾರತದ ಅತ್ಯುನ್ನತ ಗೌರವ ಭಾರತ ರತ್ನವನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಅರ್ಜುನ್ ಪ್ರಶಸ್ತಿ, ಖೇಲ್ ರತ್ನ, ಪದ್ಮಶ್ರೀ, ಪದ್ಮವಿಭೂಷಣ ಮತ್ತು ಮಹಾರಾಷ್ಟ್ರ ಭೂಷಣ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ.



































































































error: Content is protected !!
Scroll to Top