ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ

ಮುಡಾ ಹಗರಣ, ಪೋಕ್ಸೊ ಕೇಸ್‌ ತೀರ್ಪಿಗೆ ಕ್ಷಣಗಣನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪಾಲಿಗೆ ಇಂದು ನ್ಯಾಯಾಲಯದ ವಿಚಾರಣೆ ನಿರ್ಣಾಯಕವಾಗಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಪೋಕ್ಸೊ ಕೇಸಿನಲ್ಲಿ ಯಡಿಯೂರಪ್ಪ ಕುರಿತಾದ ತೀರ್ಪು ಇಂದು ಪ್ರಕಟವಾಗಲಿದೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಶುಕ್ರವಾರ ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಧಾರವಾಡ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದರ್‌ ಸಿಂಗ್ ವಾದಿಸಿದ್ದಾರೆ.
ಬೆಂಗಳೂರಿನ ಕೋರ್ಟಿನಲ್ಲಿ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ನೀಡಲಿದೆ. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು. ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಬೆಳಗ್ಗೆ 10.30ಕ್ಕೆ ತೀರ್ಪು ನೀಡಲಿದೆ. ನಿರೀಕ್ಷಣಾ ಜಾಮೀನು ಬಗ್ಗೆಯೂ ತೀರ್ಮಾನಿಸಲಿದೆ. ಈವರೆಗೆ ಖುದ್ದು ಹಾಜರಾತಿಯಿಂದ ಬಿಎಸ್‌ವೈಗೆ ಕೋರ್ಟ್​ ಅನುಮತಿ ನೀಡಿತ್ತು. ಅಲ್ಲದೇ ಬಂಧನದಿಂದಲೂ ಮಧ್ಯಂತರ ರಕ್ಷಣೆ ಮಾಡಿತ್ತು.
ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಇಬ್ಬರು ಕರ್ನಾಟಕದ ಹಿರಿಯ ರಾಜಕಾರಣಿಗಳು. ಹೀಗಾಗಿ ನಾಳೆಯ ಕೋರ್ಟ್ ತೀರ್ಪು ಇವರ ಭವಿಷ್ಯ ನಿರ್ಧರಿಸಲಿದೆ.









error: Content is protected !!
Scroll to Top