ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ – ಪ್ರ. ಕಾರ್ಯದರ್ಶಿಯಾಗಿ ಯೋಗೀಶ್‌ ಆಚಾರ್ಯ ಇನ್ನಾ ಮತ್ತು ಮಂಜುನಾಥ್‌ ಜೋಗಿ ಆನೆಕೆರೆ

ಉಡುಪಿ : ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಜಗೋಳಿಯ ಕೃಷ್ಣ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಇನ್ನಾದ ಯೋಗೀಶ್ ಆಚಾರ್ಯ ಮತ್ತು ಮಂಜುನಾಥ್ ಜೋಗಿ ಆನೆಕೆರೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಭಾರತೀಯ ಯುವ ಕಾಂಗ್ರೆಸ್‌ ನಡೆಸಿದ ಪಕ್ಷದ ಆಂತರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಕೃಷ್ಣ ಶೆಟ್ಟಿ ಅವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಯುವ ಕಾಂಗ್ರೆಸ್‌ ಅಧ್ಯಕ್ಷ ಯೋಗೀಶ್‌ ಆಚಾರ್ಯ ಹಾಗೂ ಮಂಜುನಾಥ್ ಜೋಗಿ ಆನೆಕೆರೆ ಚುನಾಯಿತರಾಗಿದ್ದಾರೆ. ಈ ಹಿಂದೆ ಕೃಷ್ಣ ಶೆಟ್ಟಿ ಅವರು ಕಾರ್ಕಳ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು, ಯೋಗೀಶ್‌ ಅವರು ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು. ಮಂಜುನಾಥ್ ಜೋಗಿ ಕಳೆದ ಸಾಲಿನಲ್ಲೂ ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಮತ್ತೊಮ್ಮೆ ಚುನಾವಣೆಯಲ್ಲಿ ಪುನಾರಾಯ್ಕೆಯಾಗಿದ್ದಾರೆ.





























































































































error: Content is protected !!
Scroll to Top