ಕಾರ್ಕಳ : ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಜೋಡುರಸ್ತೆ ಮುಖ್ಯ ಪೇಟೆಯಲ್ಲಿ ಫೆ. 9ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ. ಮಾಣಿಲ ಶ್ರೀಧಾಮದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿ ಆಶೀರ್ವನ ನೀಡಲಿರುವರು. ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶಂಕರನಾರಾಯಣ ಭಟ್ ಭದ್ರತಾ ಕೊಠಡಿ ಉದ್ಘಾಟನೆ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಸಭಾ ಕಾರ್ಯಕ್ರಮದ ಉದ್ಘಾಟನೆ ನೇರವೇರಿಸಲಿದ್ದಾರೆ. ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಮೂಲ್ಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘದ ಅಧ್ಯಕ್ಷರುಗಳು, ನಿಬಂಧಕರು, ಸಂಘದ ನಿರ್ದೇಶಕರು ಉಪಸ್ಥಿತರಿರಲಿರುವರು.
ಫೆ. 9 : ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಉದ್ಘಾಟನೆ






























































