ಕಾರ್ಕಳ : ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಇದರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ನಡೆದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಫೆ. 6ರಂದು ಗುರುಕುಲ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಕಳ ತಾಲೂಕು ಪಂಚಾಯತ್ ಸಂಯೋಜಕ ಶ್ರೀಧರ ಗೌಡ ಜಲ ಜೀವನ್ ಮಿಷನ್‌ನ ಉದ್ದೇಶ ಮತ್ತು ಕಾರ್ಯಗಳ ಬಗ್ಗೆ ವಿವರಿಸಿದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕಿ ಜ್ಯೋತಿ ನಿರೂಪಿಸಿದರು.
ಮಾಳ ಗುರುಕುಲ ಶಾಲೆ : ಪ್ರಬಂಧ ಸ್ಪರ್ಧೆ-ಚಿತ್ರಕಲಾ ಸ್ಪರ್ಧೆ






























































