ಫೆ. 11 : ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾ – ಆರ್ಯಾರ್ಚನಮ್‌

ಕಾರ್ಕಳ : ಹಿರಿಯಡ್ಕ ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲೆಯಲ್ಲಿ ಫೆ. 11ರಂದು ಆರ್ಯಾರ್ಚನಮ್‌ ನಡೆಯಲಿದೆ. ಶ್ರೀ ಕ್ಷೇತ್ರ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತರಾದ ಡಾ. ಜಿ. ಭೀಮೇಶ್ವರ ಜೋಷಿ ಅವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ.
ಬೆಳಿಗ್ಗೆ 7 ಗಂಟೆಯಿಂದ ಸಪ್ತಶತಿ ಪಾರಾಯಣ, ದುರ್ಗಾಹೋಮ, ಪವಮಾನ ಹೋಮ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಸಂಜೆ 4ರಿಂದ ಪೂಜಾ ಸಂಕಲ್ಪ, 5 ಗಂಟೆಯಿಂದ ಅಯುತಾರ್ಚನೆ, 6:45ಕ್ಕೆ ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, 7:45 ರಿಂದ ಧಾರ್ಮಿಕ ಸಭೆ ನಡೆಯಲಿದೆ.
ರಾತ್ರಿ 9 ಗಂಟೆಯಿಂದ ನಡೆಯುವ ಸಾಂಸ್ಕೃತಿಕ ವೈಭವದಲ್ಲಿ ವಿಠಲ ನಾಯಕ್‌ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಜರುಗಲಿದೆ.



































































































error: Content is protected !!
Scroll to Top