ಕಾರ್ಕಳ : ಅನುಭವ ಮಂಟಪ, ಶ್ರೀ ಮುರುಘರಾಜೇಂದ್ರ ಬೃಹನ್ಮಠ ಚಿತ್ರದುರ್ಗ ಇಲ್ಲಿ ನಡೆದ 2024-25ನೇ ಸಾಲಿನ ರಾಜ್ಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಕೊಂಕಣಿ ಭಾಷಣ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅದಿತಿ ವಿ. ನಾಯಕ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅದಿತಿ ಕಾರ್ಕಳದ ವಿ. ವಿವೇಕಾನಂದ ನಾಯಕ್ ಹಾಗೂ ನಿರ್ಮಲಾ ವಿ. ನಾಯಕ್ ದಂಪತಿ ಪುತ್ರಿ.
ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ಎ. ಯೋಗೀಶ್ ಹೆಗ್ಡೆ, ಸಂಚಾಲಕ ನರೇಂದ್ರ ಕಾಮತ್ ಕೆ., ಮುಖ್ಯ ಶಿಕ್ಷಕ ಆರ್. ನಾರಾಯಣ ಶೆಣೈ ಅಭಿನಂದಿಸಿದ್ದಾರೆ.
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ – ಕೊಂಕಣಿ ಭಾಷಣ ಸ್ಪರ್ಧೆಯಲ್ಲಿ ಅದಿತಿ ದ್ವಿತೀಯ






























































