ನಕ್ಸಲ್ ಮುಂಡಗಾರು ಲತಾ ಮತ್ತು ವನಜಾಕ್ಷಿ ಶಿವಮೊಗ್ಗ ಪೊಲೀಸರ ವಶಕ್ಕೆ

ಶಿವಮೊಗ್ಗ : ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತರುತ್ತಿದ್ದು, ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್‌ಗೆ ಹಾಜರುಪಡಿಸಲಿದ್ದು, ಬುಧವಾರ ಹೊಸನಗರದ ಕೋರ್ಟ್‌ಗೂ ಹಾಜರುಪಡಿಸಿದ ಬಳಿಕ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.









































































































error: Content is protected !!
Scroll to Top