ತ್ರೈವಾರ್ಷಿಕ ಲೆಕ್ಕಪತ್ರ ಮಂಡನೆ – ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ
ಕಾರ್ಕಳ : ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸಂಘ ರಿ. ಹಾಗೂ ಗಾಯತ್ರಿ ಮಹಿಳಾ ಮಂಡಳಿ ಕುಕ್ಕುಜೆ ದೊಂಡೆರಂಗಡಿ ಇದರ ತ್ರೈವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ ಮಹಾಸಭೆ ಫೆ. 9ರಂದು ಸಂಘದ ಕಟ್ಟಡದಲ್ಲಿ ನಡೆಯಿತು.
ಸನ್ಮಾನ – ಪ್ರತಿಭಾ ಪುರಸ್ಕಾರ
ಸಂಘಕ್ಕೆ ಸಹಕರಿಸಿದ ಕಡ್ತಲ ಗ್ರಾ. ಪಂ. ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ ಎಳ್ಳಾರೆ, ಸಂಘಕ್ಕೆ ಪಿಠೋಪಕರಣಗಳನ್ನು ಕೊಡುಗೆಯಾಗಿ ನೀಡಿದ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸಂಪತ್ ಪೂಜಾರಿ ಹಾಗೂ ಸಂಘದ ಹಿರಿಯ ಸದಸ್ಯ ವಾಸು ಆಚಾರ್ಯ ಬುಕ್ಕಿಗುಡ್ಡೆ ಮತ್ತು ಮಹಿಳಾ ಮಂಡಳಿಯ ಸದಸ್ಯೆ ಪಾರ್ವತಿ ಪರಮೇಶ್ವರ ಆಚಾರ್ಯ ದೊಂಡೆರಂಗಡಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದ ಮಾಸ್ಟರ್ ಅದ್ವಿತ್ ಆಚಾರ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.


ನೂತನ ಕಾರ್ಯಕಾರಿ ಸಮಿತಿ
ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಈಶ್ವರ ಆಚಾರ್ಯ ಪುನಾರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಅಶೋಕ್ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಆಚಾರ್ಯ, ಕೋಶಾಧಿಕಾರಿಯಾಗಿ ಶರತ್ ಆಚಾರ್ಯ ಹಾಗೂ ಕಮಿಟಿ ಸದಸ್ಯರಾಗಿ 10 ಜನರನ್ನು ಆಯ್ಕೆ ಮಾಡಲಾಯಿತು. ಮಹಿಳಾ ಮಂಡಳಿಗೆ ಮುಂದಿನ ಮೂರು ವರ್ಷಕ್ಕೆ ಕಾರ್ಯಕಾರಿ ಸಮಿತಿಯನ್ನು ಪುನರಾಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷ ಈಶ್ವರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ, ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ, ಕಾರ್ಕಳ ವಿಶ್ವಕರ್ಮ ಮಹಿಳಾ ಬಳಗದ ಉಪಾಧ್ಯಕ್ಷೆ ಕವಿತಾ ಹರೀಶ್, ಗಾಯತ್ರಿ ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸುಮನಾ ಶಾಂಬ್ರಾಯ ಆಚಾರ್ಯ, ಭಾವಿಮನೆ ಗ್ರಾಮ ಮೊಕ್ತೇಸರ ರಮೇಶ ಆಚಾರ್ಯ, ಶ್ರೀ ದೇವಿಕೃಪಾ ಗ್ರಾಮ ಮೊಕ್ತೇಸರ ಅಶೋಕ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಸುಪ್ರೀತಾ ಮತ್ತು ತಂಡದವರರು ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಉದಯ್ ಆಚಾರ್ಯ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರಸಾದ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಮಹಿಳಾ ಮಂಡಳಿಯ ಕಾರ್ಯದರ್ಶಿ ವಿಜಯ ಆಚಾರ್ಯ ಗಾಯತ್ರಿ ಮಹಿಳಾ ಮಂಡಳಿಯ ವರದಿ ಮಂಡಿಸಿದರು. ಕೋಶಾಧಿಕಾರಿ ಉಷಾ ವಿಶ್ವನಾಥ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಕಾರ್ಯಕ್ರಮದಂಗವಾಗಿ ನಡೆಸಿದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗಾಯತ್ರಿ ಮಹಿಳಾ ಮಂಡಳಿ ಅಧ್ಯಕ್ಷೆ ಕಾವ್ಯ ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ರವೀಂದ್ರ ಆಚಾರ್ಯ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಉದಯ ಆಚಾರ್ಯ ವಂದಿಸಿದರು.






























































