ಕಾರ್ಕಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಕಳ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಕೈಗೊಂಡಿರುವ ಅನಿರ್ಧಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ ಫೆ. 12ರಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ತಮ್ಮ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಸಚಿವರು ಮತ್ತು ಕಾಂಗ್ರೆಸ್ ನಾಯಕರ ಗಮನಕ್ಕೆ ತಂದು ಈಡೇರಿಸುವಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಭೂ ನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಕಾನೂನು ಘಟಕದ ಅದ್ಯಕ್ಷ ರೆಹಮತ್ತುಲ್ಲಾ, ದೀಪಕ್ ಶೆಟ್ಟಿ, ಮಂಜುನಾಥ್ ಜೋಗಿ ಉಪಸ್ಥಿತರಿದ್ದರು.
ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಭೇಟಿ






























































