ಅಂತರ್ ಜಿಲ್ಲಾ ಕುಖ್ಯಾತ ಬೈಕ್ ಕಳ್ಳರು ಪೊಲೀಸ್‌ ವಶಕ್ಕೆ

ಕಾರ್ಕಳ : ಪಡುಬಿದ್ರಿಯಲ್ಲಿ 24 ದಿನಗಳ ಹಿಂದೆ ಬೈಕ್‌ ಕಳವು ಮಾಡಿದ್ದ ಅಂತರ್ ಜಿಲ್ಲಾ ಕುಖ್ಯಾತ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಜ. 21ರಂದು ರಾತ್ರಿ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ತನ್ನ (KA19ET2765) ಬುಲೆಟ್ ಬೈಕ್‌ನ್ನು ಪಾರ್ಕ್ ಮಾಡಿ ಕೆಲಸಕ್ಕೆ ಹೋಗಿದ್ದು, ಬೆಳಗ್ಗೆ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ ಬೈಕ್ ಕಳವಾಗಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಉಡುಪಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಎಸ್‌ಐ ಪ್ರಸನ್ನ ಎಂ. ಎಸ್. ಅವರ ಆದೇಶದಂತೆ ಎಎಸ್ಐ ರಾಜೇಶ್, ಹೆಚ್.ಸಿ.ಗಳಾದ ಕೃಷ್ಣಪ್ರಸಾದ್, ನಾಗರಾಜ್ ಸನಿಲ್, ಪಿಸಿಗಳಾದ ಸಂದೇಶ್‌ ಹಾಗೂ ಶರಣ್ ಪುತ್ರನ್ ಅವರು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಿ.ಡಿ.ಆರ್. ವಿಭಾಗದ ಸಿಬ್ಬಂದಿ ದಿನೇಶ್ ಅವರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಶಿವಮೊಗ್ಗ ಸೂಳೆಬೈಲುವಿನ ಮೊಹಮದ್ ರುಹಾನ್ ಮತ್ತು ತಾಜುದ್ದೀನ್ ಪಿ.ಕೆ. (ತಾಜು) ಎಂಬಿಬ್ಬರನ್ನು ಶಿವಮೊಗ್ಗದಲ್ಲಿ ವಶಕ್ಕೆ ಪಡೆದು, ಅವರಿಂದ ಕಳವು ಮಾಡಿದ ಬುಲ್‌ಟ್ ಬೈಕ್‌ ಮತ್ತು ಕಳ್ಳತನ ಸಮಯ ಉಪಯೋಗಿಸಿದ ಮಾರುತಿ ರಿಟ್ಜ್ ಕಾರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ವಿವಿಧೆಡೆ ಪ್ರಕರಣ ದಾಖಲು
ಆರೋಪಿ ತಾಜುದ್ದೀನ್ ಮೇಲೆ ಶಿವಮೊಗ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣೆ, ವಿನೋಬನಗರ ಪೊಲೀಸ್ ಠಾಣೆ, ತುಂಗಾ ನಗರ ಪೊಲೀಸ್ ಠಾಣೆ, ದೊಡ್ಡಪೇಟೆ ಪೊಲೀಸ್ ಠಾಣೆ, ಆಗುಂಬೆ ಪೊಲೀಸ್ ಠಾಣೆಗಳಲ್ಲಿ ದರೋಡೆ, ವಿದ್ಯಾರ್ಥಿಯ ಅಪಹರಣ, ವಾಹನ ಕಳವು, ಸಾಗರ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದರೋಡೆ ಮತ್ತು ವಾಹನ ಕಳ್ಳತನ, ಹಾಸನ ಜಿಲ್ಲೆಯಲ್ಲಿ ದರೋಡೆ ಮತ್ತು ಮನೆ ಕಳವು ಪ್ರಕರಣ, ಧಾರವಾಡ ನಗರ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಮತ್ತು ಮನೆ ಕಳವು ಪ್ರಕರಣಗಳು ದಾಖಲಾಗಿದ್ದು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಾನ್ಯ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಇರುತ್ತದೆ. ಆರೋಪಿ ಮೊಹಮ್ಮದ್ ರೂಹಾನ್ ವಿರುದ್ಧ ಬೆಂಗಳೂರು ಜಿಲ್ಲೆಯ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳವು, ಶಿವಮೊಗ್ಗ ಜಿಲ್ಲೆಯ ವಿನೋಬನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ ಅಪಹರಣ ಮತ್ತು ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.





























































































































error: Content is protected !!
Scroll to Top