ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌

ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ತನ್ನಿಂದ ತಾನೇ ಚಲಿಸಿ ರಸ್ತೆ ದಾಟಿ ಹೋಗಿ ಹೋಟೆಲ್‌ಗೆ ನುಗ್ಗಿ ಕಾರು, ಬೈಕ್‌ಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ರಾತ್ರಿ ಕುಳಾಯಿಯ ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ.
ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಲ್ಲಿ ಚಲಿಸಿಕೊಂಡು ಹೋಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿ ಹೊಟೇಲ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಎರಡು ಆಟೋರಿಕ್ಷಾಗಳು, ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







error: Content is protected !!
Scroll to Top