ಮೆಟ್ರೋ ಟಿಕೆಟ್​ ದರ ಏರಿಕೆ ಖಂಡಿಸಿ ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ ಹದಿನಾರು ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಶುಕ್ರವಾರ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಮೆಟ್ರೋ ದರ ಏರಿಕೆಯು 45-50% ಎಂದು ಹೇಳಲಾಗಿದ್ದರೂ, ಪ್ರಯಾಣಿಕರು ಅದು 100% ರಷ್ಟು ಏರಿಕೆಯಾಗಿತ್ತು ಎಂದು ಆರೋಪಿಸಿದ್ದರು. ದರ ಏರಿಕೆಯಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಮೆಟ್ರೋ ದರ ಏರಿಕೆಯನ್ನು ಜನರು ಖಂಡಿಸುತ್ತಿದ್ದಾರೆ. ರೈತರು, ಕನ್ನಡಪರ ಹೋರಾಟಗಾರರು, ಪ್ರಗತಿಪರ ಸಂಘಟನೆಗಳು ಮತ್ತು ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರು ಬಿಎಂಆರ್​ಸಿಎಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಮೆಟ್ರೋ ದರ ಯಥೇಚ್ಚಾಗಿ ಏರಿಕೆಯಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶಗೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದರು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ಯಾವ ಯಾವ ಸ್ಟೇಜ್​ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ ಎಂದು ಪರಿಶೀಲಿಸಿ ಕೂಡಲೇ ಕಡಿತಗೊಳಿಸುವಂತೆ ಬಿಎಂಆರ್​ಸಿಎಲ್​ಗೆ ಸೂಚನೆ ನೀಡಿದ್ದರು.























































error: Content is protected !!
Scroll to Top