ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.
ಮಹೇಶ್ ಎನ್ನುವರ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ ನಡೆಸಿ, ಘೋಷಣೆ ಕೂಗಿ ಪರಾರಿಯಾಗಿದ್ದಾರೆ. ಕಲ್ಲು ತೂರಾಟದಿಂದ ಮನೆಯ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ. ಮನೆ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.















































































error: Content is protected !!
Scroll to Top