ಉಡುಪಿ: ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಭಾರಿ ಹೊಡೆದಾಟ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಣಿಪಾಲದಲ್ಲಿ ಸಂಭವಿಸಿದೆ. ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳು ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಓರ್ವ ವಿದ್ಯಾರ್ಥಿಯ ಬಟ್ಟೆ ಹರಿದುಹೋಗಿದೆ. ಕೆಲವು ವಿದ್ಯಾರ್ಥಿಗಳಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಬಾರ್ ಮುಂದೆ ಮದ್ಯದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಪಾಟ ನಡೆಸಿದ್ದಾರೆ. ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಬಟ್ಟೆ ಹರಿದು ಹೋಗುವವರೆಗೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹೊಡೆದಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವಿದ್ಯಾರ್ಥಿಗಳ ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಣಿಪಾಲ : ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ







































