ಲೈಂಗಿಕ ದೌರ್ಜನ್ಯ ಆರೋಪ : ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆ ಕಿರುತೆರೆ ಸಿರಿಯಲ್‌ ನಟ ಚರಿತ್ ಬಾಲಪ್ಪ ಅವರನ್ನು ಬೆಂಗಳೂರಿನ ಆರ್. ಆರ್. ನಗರ ಪೊಲೀಸರು ಬಂಧಿಸಿದ್ದಾರೆ.
ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಅಲ್ಲದೇ, ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೂಡ ಮಾಡಲಾಗಿದೆ. ದೂರು ಆಧರಿಸಿ ಪೊಲೀಸರು ನಟನನ್ನು ಬಂದಿದ್ದಾರೆ.

ಲೈಂಗಿಕ ದೌರ್ಜನ್ಯ ಮಾತ್ರವಲ್ಲದೇ ಚರಿತ್ ಬಾಳಪ್ಪ ಅವರು ಆ ಯುವತಿಯ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಎಲ್ಲ ದೂರುಗಳನ್ನು ಆಧರಿಸಿ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಮುಂತಾದ ಕೇಸ್ ದಾಖಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಪತ್ನಿಯಿಂದ ಚರಿತ್ ಬಾಳಪ್ಪ ಡಿವೋರ್ಸ್ ಪಡೆದಿದ್ದಾರೆ. ಈ ಹಿಂದೆ ಚರಿತ್ ಬಾಳಪ್ಪ ವಿರುದ್ದವೇ ಪತ್ನಿ ಮಂಜುಶ್ರೀ ಕೂಡ ದೂರು ನೀಡಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಪತ್ನಿಗೆ ಚರಿತ್ ಬಾಳಪ್ಪ ಬೆದರಿಕೆ ಹಾಕಿದ್ದರು. ಆ ಕುರಿತು 2024ರ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ‌ ಎನ್​ಸಿಆರ್​ ದಾಖಲಾಗಿತ್ತು.
ಕನ್ನಡದ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಹಲವು ಸೀರಿಯಲ್​ಗಳಲ್ಲಿ ಚರಿತ್ ಬಾಳಪ್ಪ ನಟಿಸಿದ್ದಾರೆ. ತೆಲುಗಿನ ಅನೇಕ ಸೀರಿಯಲ್​ಗಳಲ್ಲೂ ಅಭಿನಯಿಸಿದ್ದಾರೆ.





























































































































error: Content is protected !!
Scroll to Top