ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ

ಹಾಸನ: ಬೆಂಗಳೂರು–ಮಂಗಳೂರು ಹೈವೇಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿ 7 ಕಾರುಗಳು ಜಖಂಗೊಂಡಿವೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.‌ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್‌ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಜಖಂಗೊಂಡಿವೆ.
ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಜಖಂಗೊಂಡ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ.





























































































































error: Content is protected !!
Scroll to Top