ರಾಮಾಯಣ ವೇದದ ಅರ್ಹತೆ ಪಡೆದುಕೊಂಡಿದೆ – ಡಾ. ರಾಘವೇಂದ್ರ ರಾವ್

ಕಾರ್ಕಳ : ದಶರಥ ಮಹಾರಾಜನ ಪುತ್ರನಾಗಿ ಈ ಭೂಮಿಯಲ್ಲಿ ಜನಿಸಿದ ಶ್ರೀರಾಮಚಂದ್ರ ತನ್ನ ಆದರ್ಶ ಮತ್ತು ಉದಾತ್ತ ಗುಣಗಳಿಂದ ಮಹಾವಿಷ್ಣುವಿನ ಪದವಿಗೇರಿದ ಮತ್ತು ರಾಮಾಯಣವು ವೇದದ ಅರ್ಹತೆಯನ್ನು ಪಡೆದುಕೊಂಡಿತು ಎಂದು ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಅಭಿಪ್ರಾಯಪಟ್ಟರು.
ಅವರು ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ತಿಂಗಳ ಕಾರ್ಯಕ್ರಮ ರಾಮಸಾಗರಗಾಮಿನೀ- ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಮಾಲೆಯ ದ್ವಿತೀಯ ಸೋಪಾನ ‘ಯಜ್ಞ ಸಂರಕ್ಷಣೆಯ ಪಥದಲ್ಲಿ’ ಎಂಬ ವಿಷಯದ ಕುರಿತು ಫೆ. 15ರಂದು ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಉಪನ್ಯಾಸ ನೀಡಿದರು.
ಯಜ್ಞಕ್ಕೆ ಉಪಟಳ ನೀಡುತ್ತಿದ್ದ ರಾಕ್ಷಸರನ್ನು ರಾಮ ಲಕ್ಷ್ಮಣರು ಸಂಹರಿಸಿ ಯಜ್ಞ ಸಂರಕ್ಷಣೆ ಮಾಡಿದ ಸನ್ನಿವೇಶವನ್ನು ಅವರು ವಿವರಿಸಿದರು.

ಡಾ. ನಾ. ಮೊಗಸಾಲೆ, ಎಸ್. ನಿತ್ಯಾನಂದ ಪೈ, ಮಿತ್ರಪ್ರಭಾ ಹೆಗ್ಡೆ, ಏರ್ ವೈಸ್ ಮಾರ್ಷೆಲ್ ರಮೇಶ್ ಕಾರ್ಣಿಕ್, ಕಾರ್ಯಕ್ರಮದ ಪ್ರಾಯೋಜಕರಾದ ಲಕ್ಷ್ಮಣ ಕುಡ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿ ಪ್ರಾರ್ಥಿಸಿದರು. ಸದಾನಂದ ನಾರಾವಿ ಸ್ವಾಗತಿಸಿ, ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿದರು. ಸುಧಾಕರ ಶ್ಯಾನುಭೋಗ್ ವಂದಿಸಿದರು.





























































































































error: Content is protected !!
Scroll to Top