ಕಾರ್ಕಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಚರಿಸಲಾಯಿತು. ಆಡಳಿತ ಮೊಕ್ತೇಸರ ಗಿರೀಶ್ ರಾವ್ ದೀಪ ಪ್ರಜ್ವಲನೆಯನ್ನು ಮಾಡಿ, ಮಹಾರಾಜರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಯನ್ನು ನೆರವೇರಿಸಿ, ಶಿವಾಜಿಯ ಶಿವನೇರಿ ಜನಕನ ಸಿಂಹಘಡದ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೊತೆ ಮೊಕ್ತೆಸರರಾದ ಗಣೇಶ್ ರಾವ್ ರಾಮಚಂದ್ರರಾವ್, ಸುಧೀಂದ್ರರಾವ್, ಯೂರೋ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ರಾಜೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿ, ಶಾಂತಿ ವಂದಿಸಿದರು






























































