ಕುಕ್ಕುಂದೂರು ಹಾಲು ಉತ್ಪಾದನಾ ಸಹಕಾರಿ ಸಂಘದ ಹೊಸ ಕಟ್ಟಡಕ್ಕೆ ಧರ್ಮಸ್ಥಳ ಯೋಜನೆಯಿಂದ 2 ಲ.ರೂ. ಮಂಜೂರು

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಹಾಲು ಉತ್ಪಾದನಾ ಸಹಕಾರಿ ಸಂಘದ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಕ್ಷೇತ್ರದಿಂದ ಮಂಜೂರಾದ 2 ಲಕ್ಷ ರೂ.ಯ ಮಂಜೂರಾತಿ ಪತ್ರವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಕಮಲಾಕ್ಷ ನಾಯಕ್ ಮತ್ತು ವೃಷಭರಾಜ್ ಕಡಂಬ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಉದಯ ಕುಮಾರ್ ವಿ. ಶೆಟ್ಟಿ ಹಾಗೂ ತಾಲೂಕಿನ ಯೋಜನಾಧಿಕಾರಿ ಹೇಮಲತಾ ಅವರು ಹಾಲು ಉತ್ಪಾದಕ ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ತಾಲೂಕು ಜನಜಾಗೃತಿ ಸದಸ್ಯರಾದ ಯೋಗೀಶ್ ಸಾಲಿಯಾನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಕುಮಾರ್ ಉಪಸ್ಥಿತರಿದ್ದು, ಕಟ್ಟಡದ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಹಣದ ಅವಶ್ಯಕತೆ ಇದ್ದಾಗ ಮಂಜೂರಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷರಾದ ಜಯಶೆಟ್ಟಿ, ಆನಂದ ಪೂಜಾರಿ, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಒಕ್ಕೂಟದ ಪದಾಧಿಕಾರಿಗಳು, ಹಾಲು ಉತ್ಪದನಾ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಹಾಲು ಉತ್ಪಾದನಾ ಸಂಘದ ಸದಸ್ಯರು ಸ್ವಾಗತಿಸಿ, ವಂದಿಸಿದರು.





























































































































error: Content is protected !!
Scroll to Top