ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ. 20ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಶ್ರೀನಿಧಿ (24) ಸಾವನಪ್ಪಿದವರು. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































































































error: Content is protected !!
Scroll to Top