ಮಿಯ್ಯಾರು ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬ

ಕಾರ್ಕಳ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಗುಪ್ಪೆ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಮಿಯ್ಯಾರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ (F.L.N) ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷೆ ಸನ್ಮತಿ ನಾಯಕ್, ಉಪಾಧ್ಯಕ್ಷೆ ಶ್ರೀದೇವಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಜಯ ಶೆಟ್ಟಿ, ಉಪಾಧ್ಯಕ್ಷೆ ದೀಪ್ತಿ ದಿನೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಕಾರ್ಯದರ್ಶಿ ಸುಮಿತ್ರ ಇ,ಇಸ್ರೋ ನಿವೃತ್ತ ವಿಜ್ಞಾನಿ ಜನಾರ್ಧನ್ ಇ, ಗ್ರಾ. ಪಂ. ಸದಸ್ಯರಾದ ಸುಕುಮಾರ್, ಇಂದಿರಾ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ಬಾಲಕೃಷ್ಣ ನಾಯಕ್, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ ದೇವಾಡಿಗ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಆನಂದ ಪೂಜಾರಿ, ನಿವೃತ್ತ ಇಸ್ರೋ ವಿಜ್ಞಾನಿ ಜನಾರ್ಧನ್ ಇ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮನೋಹರ್‌ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಉಮೇಶ್ ಕೆ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮೂಹ ಸಂಪನ್ಮೂಲ ಅಧಿಕಾರಿ ಕೃಷ್ಣ ಕುಮಾರ್ ಎನ್‌. ಇ. ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಸುನಂದ ವಂದಿಸಿದರು. ಸಹ ಶಿಕ್ಷಕಿಯರಾದ ವನಿತಾ ಹೆಗ್ಡೆ, ಅಶ್ವಿನಿ, ಮಂಜುಳ, ಚೈತ್ರ ಸಹಕರಿಸಿದರು.





























































































































error: Content is protected !!
Scroll to Top