ಕಾರ್ಕಳ : ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ವಿಶ್ವ ಸ್ಕೌಟ್ಸ್ ಸ್ಥಾಪಕರ ದಿನಾಚರಣೆ ಜರುಗಿತು. ಕಾರ್ಯಕ್ರಮದಲ್ಲಿ ಕಬ್ ಮತ್ತು ಬುಲ್ ಬುಲ್, ಬನ್ನೀಸ್, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಡ್ರಾಯಿಂಗ್, ಕ್ರಾಫ್ಟ್, ಬೆಂಕಿ ಇಲ್ಲದೆ ಅಡುಗೆ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲಾ ಗೈಡ್ಸ್ ತರಬೇತು ಆಯುಕ್ತೆ ಸಾವಿತ್ರಿ ಮನೋಹರ್ ಮಕ್ಕಳಿಗೆ ವಿವಿಧ ಹಾಡು ಹಾಗೂ ಚಟುವಟಿಕೆಗಳ ಮೂಲಕ ಸ್ಕೌಟ್ ಮತ್ತು ಗೈಡ್ ಕಾರ್ಯಯೋಜನೆಗಳ ಮಾಹಿತಿ ನೀಡಿದರು. ಕಾರ್ಕಳ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಮಾತನಾಡಿ, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಶಿಸ್ತು, ಸಮಾಜಸೇವೆ, ಪರಿಸರ ಕಾಳಜಿಯಂತಹ ಜೀವನ ಮೌಲ್ಯಗಳನ್ನು ತಿಳಿಸುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಾಥಮಿಕ ವಿಭಾಗದ ಲಿನೆಟ್ ಮರಿನಾ ಡಿ’ಸೋಜ, ಪ್ರೌಢಶಾಲಾ ವಿಭಾಗದ ಪ್ರಕಾಶ್ ಡಿಸೋಜ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೈಡ್ಸ್ ಕ್ಯಾಪ್ಟನ್ಗಳಾದ ಆಶಾ ಜ್ಯೋತಿ ಸ್ವಾಗತಿಸಿ, ರಶ್ಮಿ ವಂದಿಸಿದರು. ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಬುಲ್ ಬುಲ್ ಶಿಕ್ಷಕಿ ರಮಿತಾ ವಿಜೇತರ ಪಟ್ಟಿ ವಾಚಿಸಿದರು.





























































