ಹೆಬ್ರಿ: ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುದ್ರಾಡಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ಎಸ್.ಡಿ.ಎಂ.ಸಿ ಶುಭಧರ ಶೆಟ್ಟಿ ವಹಿಸಿದ್ದರು.
ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಮ್ಯಕಾಂತಿ, ಸದಸ್ಯರಾದ ಸನತ್ ಕುಮಾರ್, ಶಾಂತಾ ದಿನೇಶ್ ಪೂಜಾರಿ, ಗಣಪತಿ ಎಂ, ಕಾರ್ಕಳ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಸಂತೋಷ ಕುಮಾರ್ ಶೆಟ್ಟಿ, ಶಿವಪುರ ಕ್ಲಸ್ಟರ್ ಸಿ.ಆರ್.ಪಿ ಪ್ರೀತೇಶ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಶ್ರೀನಿವಾಸ ಭಂಡಾರಿ ಸ್ವಾಗತಿಸಿದರು. ಮುದ್ರಾಡಿ ಕ್ಲಸ್ಟರ್ ಸಿ.ಆರ್.ಪಿ ರಾಘವೇಂದ್ರ ಆಚಾರ್ಯ ವಂದಿಸಿದರು. ಶಿಕ್ಷಕ ಸತೀಶ ಬೇಳಂಜೆ ನಿರೂಪಿಸಿದರು.
ಕ್ಲಸ್ಟರ್ ಮಟ್ಟದ 11 ಶಾಲೆಯ 110 ವಿದ್ಯಾರ್ಥಿಗಳು ಭಾಗವಹಿಸಿದ್ದು ಓದುವ, ಬರೆಯುವ, ಗಣಿತ ಕಲಿಕೆ, ಪೋಷಕರ ಸಹಾಯದಿಂದ ಕಲಿಕೆ ಹೀಗೆ ವಿವಿಧ 7 ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಸಂಪನ್ಮೂಲ ವ್ಯಕ್ತಿಗಳು ಸ್ಪರ್ಧೆ ನಡೆಸಿಕೊಟ್ಟರು.
ಮುದ್ರಾಡಿ: ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ
































































