ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ : ಪ್ರತಾಪ್‌ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೀಡಿದ್ದ ದೂರು ಆಧರಿಸಿ ಮೈಸೂರು ಉದಯಗಿರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮಾಜಿ ಸಂಸದ ಪ್ರತಾಪ್ ಸಿಂಹ ಫೆಬ್ರವರಿ 20 ರಂದು ಉದಯಗಿರಿ ವ್ಯಾಪ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ಸಮುದಾಯದವರು ಈ ದೇಶದ ಪ್ರಜೆಗಳೇ ಅಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಜನ ಸಂಖ್ಯೆ ಜಾಸ್ತಿ ಮಾಡಿಕೊಂಡು ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ಕೋಮು ಘರ್ಷಣೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾ ಭಾಷಣವನ್ನು ಮಾಡಿದ್ದಾರೆ. ಆದ್ದರಿಂದ ಪ್ರತಾಪ್ ಸಿಂಹರವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ದೂರು ನೀಡಿದ್ದಾರೆ.

ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ ಅವರು, ‘ದೇಶ ಇಬ್ಭಾಗವಾದಾಗಲೇ ಮುಸ್ಲಿಮರು ಈ ದೇಶ ಬಿಟ್ಟು ತೊಲಗಿಬಿಡಬೇಕಿತ್ತು. ಇಲ್ಲಿ ಉಳಿದಕೊಂಡವರು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದು ಹೇಳಿದ್ದರು.





























































































































error: Content is protected !!
Scroll to Top