ಫೆ 28 : ದಲಿತರ ಹಣ ದುರ್ಬಳಕೆ ಮಾಡಿರುವ ಸರಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳ ಬಿಜೆಪಿ ವತಿಯಿಂದ ಪೂರ್ವಭಾವಿ ಸಭೆ

ಕಾರ್ಕಳ : ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್‌ಸಿ/ಎಸ್‌ಪಿ – ಟಿ.ಎಸ್.ಪಿ.) 25,000 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಕುರಿತಂತೆ ಕಾರ್ಕಳ ಬಿಜೆಪಿ ವತಿಯಿಂದ ಪೂರ್ವಭಾವಿ ಸಭೆಯು ವಿಕಾಸ ಜನಸೇವಾ ಕಚೇರಿಯಲ್ಲಿ ಜರುಗಿತು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಮಾತನಾಡಿ, ರಾಜ್ಯಾದ್ಯಂತ ಜನಾಂದೋಲನವನ್ನು ರೂಪಿಸಿರುವ ಬಿಜೆಪಿ ಈಗಾಗಲೇ 14 ತಂಡಗಳನ್ನು ರಚಿಸಿದ್ದು, ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಆಗ್ರಹಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರಾಜ್ಯ ತಂಡದ ಪ್ರಮುಖರಾದ ಸಂಸದ ರಮೇಶ್ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಆ ನಿಟ್ಟಿನಲ್ಲಿ ಕಾರ್ಕಳ ತಾಲೂಕಿನಿಂದ ಅತಿಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.

ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಸತೀಶ್‌ ಪೂಜಾರಿ ಬೋಳ, ಜಿಲ್ಲಾ ಉಪಾಧ್ಯಕ್ಷ ಜಯರಾಮ್‌ ಸಾಲ್ಯಾನ್‌, ಜಿಲ್ಲಾ ಪ್ರಮುಖರಾದ ಶೈಲೇಶ್‌, ರವೀಂದ್ರ ಕುಮಾರ್‌, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ವರಂಗ, ಕಾರ್ಕಳ ತಾಲೂಕು ಎಸ್‌ಸಿ ಮೋರ್ಚಾ ಅಧ್ಯಕ್ಷ ಸಂಜೀವ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಪ್ರಕಾಶ್‌ ಬಲಿಪ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯಾ ಬಂಗೇರ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ, ಒಬಿಸಿ ಮೋರ್ಚಾ ಅಧ್ಯಕ್ಷ ಪ್ರಸಾದ್‌ ಐಸಿರ, ವಿವಿಧ ಶಕ್ತಕೇಂದ್ರ ಅಧ್ಯಕ್ಷರು, ತಾಲೂಕು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.





























































































































error: Content is protected !!
Scroll to Top