ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌

ಬೆಂಗಳೂರು : ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆಗಳಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆ ಬರುತ್ತದೆ ಎಂಬುದು ಬಹಿರಂಗವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯದ ಹೋಟೆಲ್‌, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿದೆ. . ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಘೋಷಿಸಿದ್ದಾರೆ.
ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಗುಂಡೂರಾವ್ ಹೇಳಿದ್ದಾರೆ.
ಹೋಟೆಲ್, ಅಂಗಡಿಗಳಿಂದ 251 ತಿಂಡಿಗಳ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವುಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಮೊದಲು ಹೋಟೆಲ್​ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ಕಾರಣವಾದ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್​​ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50 ರಷ್ಟು ಸ್ಯಾಂಪಲ್ಸ್​ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಇಡ್ಲಿ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಗೊತ್ತಾಗಿದೆ. ಉಳಿದ ಸ್ಯಾಂಪಲ್ಸ್​​ ವರದಿಗಾಗಿ ಕಾಯಲಾಗುತ್ತಿದೆ.

















































error: Content is protected !!
Scroll to Top