ಕಾರ್ಕಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 27ರಂದು ಮುಡಾರು ಗ್ರಾಮದಲ್ಲಿ ಸಂಭವಿಸಿದೆ. ವಿನೋದ (46) ನೇಣಿಗೆ ಶರಣಾದವರು. ಇವರು ಕಳೆದ ಆರು ತಿಂಗಳಿನಿಂದ ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ವಿಚಾರವಾಗಿ ಮನನೊಂದು ತನ್ನ ಮನೆಯ ಮಾಡಿನ ಮರದ ಪಟ್ಟಿಗೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಹಿಳೆ ನೇಣು ಬಿಗಿದು ಆತ್ಮಹತ್ಯೆ






























































