ಕಾರ್ಕಳ : ಮನೆಯ ಬಾಗಿಲು ಮುರಿದು 79 ಗ್ರಾಂ ತೂಕದ ಚಿನ್ನಾಭರಣ ಕಳವುಗೈದ ಘಟನೆ ಫೆ. 27ರಂದು ನಿಟ್ಟೆ ಗ್ರಾಮದಲ್ಲಿ ಸಂಭವಿಸಿದೆ. ಸಂಪ ಎಂಬವರ ಮನೆಯ ಮುಂಬಾಗಿಲಿಗೆ ಹಾಕಿದ ಬೀಗವನ್ನು ಯಾರೋ ಕಳ್ಳರು ಯಾವುದೋ ಸಾಧನದಿಂದ ಮುರಿದು ಮನೆಯೊಳಗೆ ಪ್ರವೇಶಿಸಿ ಬೆಡ್ ರೂಮಿನ ಸೆಲ್ಫ್ ನಲ್ಲಿ ಬ್ಯಾಗಿನಲ್ಲಿ ಇಟ್ಟಿದ್ದ 79 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮನೆಯ ಬಾಗಿಲು ಮುರಿದು 79 ಗ್ರಾಂ ತೂಕದ ಚಿನ್ನಾಭರಣ ಕಳವು






























































