ಕಾರ್ಕಳ : ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಮೀನಿನ ಅಂಗಡಿಗೆ ನುಗ್ಗಿದ ಘಟನೆ ಮಾ. 1ರ ರಾತ್ರಿ ಅತ್ತೂರು ಕ್ರಾಸ್‌ನಲ್ಲಿ ಸಂಭವಿಸಿದೆ. ಮುಂಭಾಗದಲ್ಲಿ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮೀನಿನ ಅಂಗಡಿಗೆ ನುಗ್ಗಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ಅಲ್ಲದೆ ಇದೇ ವೇಳೆ ನಿರ್ಲಕ್ಷತನದಿಂದ ಬರುತ್ತಿದ್ದ ಬೈಕ್ ಸವಾರ ಬೈಕ್ ಸಮೇತ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾನೆ.
ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮೀನಿನ ಅಂಗಡಿಗೆ ನುಗ್ಗಿದ ಕಾರು






























































