ಕಾರು ಡಿವೈಡರ್‌ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

ಮಂಜೇಶ್ವರ: ಕಾಸರಗೋಡಿನ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಸಂಗಡಿ ಹತ್ತಿರ ವಾಮಂಜೂರು ಚೆಕ್​ಪೋಸ್ಟ್ ಬಳಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಅವರ ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿಗೆ ತೆರಳಬೇಕಿದ್ದ ಕಿಶನ್‌ರನ್ನು ಪೈವಳಿಕೆ ಬಾಯಿಕಟ್ಟೆಯಿಂದ ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ವಾಮಂಜೂರು ಚೆಕ್‌ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ . ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.









































































































error: Content is protected !!
Scroll to Top