ವಿದೇಶದಿಂದ ಚಿನ್ನ ಅಕ್ರಮವಾಗಿ ಸಾಗಾಟ : ಕನ್ನಡದ ನಟಿ ಕಸ್ಟಮ್ಸ್‌ ವಶ

ಕರ್ನಾಟಕದ ಡಿಜಿಪಿಗೆ ಸಂಬಂಧಿಯಾಗಿರುವ ನಟಿ

ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ರನ್ಯಾ ರಾವ್ ನಟಿಸಿ ಕನ್ನಡಿಗರಿಗೆ ಪರಿಚಿತರಾಗಿದ್ದರು.
ನಟಿ ರನ್ಯಾ ರಾವ್ ಕರ್ನಾಟಕದ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ ಡಿಆರ್​ಐ ಅಧಿಕಾರಿಗಳು ರನ್ಯಾ ರಾವ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ನಟಿಯ ಮೇಲೆ ಇದೆ.
ರನ್ಯಾ ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. 2016ರಲ್ಲಿ ತಮಿಳಿನ ಸಿನಿಮಾ ಒಂದನ್ನು ಮಾಡಿದರು. ಆದರೆ, ಇದು ಅಷ್ಟಾಗಿ ಗೆಲುವು ತಂದುಕೊಡಲಿಲ್ಲ. 2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಬಳಿಕ ಅವರಿಗೆ ಅಷ್ಟಾಗಿ ಅವಕಾಶಗಳು ಸಿಗಲಿಲ್ಲ.





























































































































error: Content is protected !!
Scroll to Top