ಸಾಣೂರು ಪಂಚಾಯತ್‌ ದ್ವಿತೀಯ ಗ್ರಾಮ ಸಭೆ

ಕಾರ್ಕಳ : ಸಾಣೂರು ಗ್ರಾಮ ಪಂಚಾಯತಿಯ ದ್ವಿತೀಯ ಗ್ರಾಮಸಭೆ ಮಾ. 4ರಂದು ಪಂಚಾಯತ್‌ ಅಧ್ಯಕ್ಷ ಯುವರಾಜ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಸಾಣೂರು ಸುವರ್ಣ ಗ್ರಾಮೋದಯ ಸೌಧದಲ್ಲಿ ನಡೆಯಿತು. ಗ್ರಾಮಸಭಾ ನೋಡೆಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ. ಭಾಗಿಯಾಗಿದ್ದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು, ಇಲಾಖಾವಾರು ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷೆ ಯಶೋಧಾ ವಿ. ಶೆಟ್ಟಿ, ಸದಸ್ಯರು, ಸಿಬ್ಬಂದಿ ವರ್ಗ, ಶಾಲಾ ಮುಖ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಆಶಾ ಕಾರ್ಯಕರ್ತರು, ಶಕ್ತಿ ಸಮೃದ್ಧಿ ಸಂಜೀವಿನಿ ಒಕ್ಕೂಟ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಎಂ. ಸಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸವಿತಾ ಪ್ರಭು ವಾರ್ಷಿಕ ವರದಿ ವಾಚಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ಭಂಡಾರ್ಕಾರ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.































































































error: Content is protected !!
Scroll to Top