ನಕ್ಸಲ್ ಬಾಧಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋ.ರೂ.
ಬೆಂಗಳೂರು: ರಾಜ್ಯ ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ.
ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ರೂಪಿಸುವುದಾಗಿ ತಿಳಿಸಿದರು.
ಪ್ರಸ್ತುತ, ಕಾರ್ಕಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಎಎನ್‌ಎಫ್ ರಾಜ್ಯಾದ್ಯಂತ 17 ಶಿಬಿರಗಳಲ್ಲಿ 500 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊಂದಿದೆ.

ನ್ಯೂಸ್ ಕಾರ್ಕಳ ವರದಿ
ಕಳೆದ ಫೆ. 7ರಂದು ನ್ಯೂಸ್ ಕಾರ್ಕಳ ವೆಬ್‌ಸೈಟ್ ರಾಜ್ಯ ನಕ್ಸಲ್ ಮುಕ್ತ-ಎಎನ್‌ಎಫ್ ಮುಂದಿನ ಕಾರ್ಯವೇನು ಎಂಬ ಶೀರ್ಷಿಕೆಯಲ್ಲಿ ಈ ಕುರಿತು ವಿಶೇಷ ವರದಿ ಪ್ರಕಟಿಸಿತ್ತು.
ಇದನ್ನು ಓದಿ : https://newskarkala.com/2025/02/07/what-is-the-next-responsibility-of-anf1/
ಸೈಬರ್ ಅಪರಾಧ ವಿಭಾಗಕ್ಕೆ 5 ಕೋಟಿ ರೂ.
ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಮಾದಕದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗವನ್ನು ಬಲಗೊಳಿಸಲು 5 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.































































