ಕಾರ್ಕಳ : ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಕರ್ನಾಟಕ ಸರಕಾರಿ ನೌಕರರ ಸಂಘ, ಕಾರ್ಕಳ ಸಾರ್ವಜನಿಕ ಆಸ್ಪತ್ರೆ, ಕಾರ್ಕಳ ಯುವವಾವಿನಿ (ರಿ.), ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 9ರಂದು ಬೆಳಿಗ್ಗೆ 9.30ರಿಂದ ಬಂಡೀಮಠದಲ್ಲಿರುವ ಸರಕಾರಿ ನೌಕರರ ಭವನದಲ್ಲಿ ಉಚಿತವಾಗಿ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ, ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗದಿಂದ ಆಯ್ದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಲಾಗುವುದು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ, ಗೊತ್ತುಪಡಿಸಿದ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ತಮ್ಮದೇ ಆದ ವಾಹನದಲ್ಲಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿ, ಮರುದಿನ ವಾಪಾಸು ಕರೆದು ತಂದು ಬಿಡಲಾಗುವುದು. ತಪಾಸಣೆಗೆ ಬರುವವರು ಆಧಾರ್ ಕಾರ್ಡ್‌ನ್ನು ತರಬೇಕು. ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಇವರ ವತಿಯಿಂದ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.































































