ಮಹಿಳಾ ಮೋರ್ಚಾ ವತಿಯಿಂದ ಸ್ತನ ಕ್ಯಾನ್ಸರ್ – ಗರ್ಭ ಕಂಠದ ಕ್ಯಾನ್ಸರ್‌ ತಪಾಸಣಾ ಶಿಬಿರ

ಕಾರ್ಕಳ : ಬಿಜೆಪಿ ಮಹಿಳಾ ಮೋರ್ಚಾ ಮತ್ತು ಹೆಬ್ರಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಣಿಪಾಲ ಮಾಹೆ ಸಂಸ್ಥೆಯ ಸಹಯೋಗದೊಂದಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಗೆ ಮಾ. 8ರಂದು ಹೆಬ್ರಿ ಶ್ರೀ ರಾಮ ಮಂದಿರದಲ್ಲಿ ಸ್ತನ ಕ್ಯಾನ್ಸರ್ ಮತ್ತು ಗರ್ಭ ಕಂಠದ ಕ್ಯಾನ್ಸರ್‌ ತಪಾಸಣಾ ಶಿಬಿರ ನಡೆಯಿತು.

ಡಾ. ಎಂ. ಎಸ್‌. ರಾವ್‌ ಮುದ್ರಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮೊದಲೇ ಆ ಬಗ್ಗೆ ಮುಂಜಾಗ್ರತೆ ವಹಿಸುವುದು ಉತ್ತಮ. ಈ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್‌ ಹಾಗೂ ಗರ್ಭ ಕಂಠದ ಕ್ಯಾನ್ಸರ್‌ ತಪಾಸಣಾ ಶಿಬಿರ ಆಯೋಜಿಸಿರುವುದು ಪ್ರಯೋಜನಕಾರಿ ಎಂದರು.

ಕಾರ್ಯಕ್ರಮದಲ್ಲಿ ಸರ್ಪಸುತ್ತು ಮತ್ತು ಗಂಟು ನೋವಿಗೆ ನಾಟಿ ಔಷದಿ ನೀಡುತ್ತಿರುವ ಮುದ್ರಾಡಿ ನಾಟಿ ವೈದ್ಯೆ ಶಾರದ ಗಣಪತಿ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾರ್ಕಳ ಮಂಡಲ ಬಿಜೆಪಿ ಅಧ್ಯಕ್ಷ ನವೀನ್‌ ನಾಯಕ್‌, ಕಾರ್ಕಳ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯಾ ಡಿ. ಬಂಗೇರ, ಪಕ್ಷದ ಹಿರಿಯರಾದ ಪ್ರಭಾಕರ ಕಾಮತ್‌ ಬೋಳ, ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ, ಕಾರ್ಯದರ್ಶಿ ಸುಗಂಧಿ ನಾಯಕ್‌, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‌ ಶೆಟ್ಟಿ ಶಿವಪುರ, ಸತೀಶ್‌ ಪೂಜಾರಿ ಬೋಳ, ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯಕ್‌, ಜಿ. ಪಂ. ಮಾಜಿ ಸದಸ್ಯೆ ಜ್ಯೋತಿ ಹರೀಶ್‌, ಸಮುದಾಯ ವೈದ್ಯಕೀಯ ವಿಭಾಗದ ಡಾ. ರಮಿತ್‌, ಒಟಿಜಿ ವಿಭಾಗದ ಡಾ. ಪ್ರಣವಿ ಮೊದಲಾದವರು ಉಪಸ್ಥಿತರಿದ್ದರು. ಒಟ್ಟು 70 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.
ಹೆಬ್ರಿ ಶಕ್ತಿಕೇಂದ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಪ್ರಭು ಸ್ವಾಗತಿಸಿದರು. ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಮಾ ರವಿಕಾಂತ್‌ ಕಾರ್ಯಕ್ರಮ ನಿರೂಪಿಸಿ, ವಿನುತ ಆಚಾರ್ಯ ವಂದಿಸಿದರು.









































































































error: Content is protected !!
Scroll to Top