ಉಡುಪಿ : ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹೆಬ್ರಿಯ ಸಾವಿತ್ರಿ (67) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 9ರಂದು ನಡೆದಿದೆ. ಸುಮಾರು 6 ತಿಂಗಳಿನಿಂದ ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮನನೊಂದು ಮನೆ ಹತ್ತಿರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಅವರ ಮಗಳು ವಿನುತಾ ಗಾಗಿಹಕ್ಲು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ


































