ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 8ರಂದು ದೆಹಲಿಯ ಇಂದಿರಾ ಭವನದಲ್ಲಿ ನಡೆದ ಶಕ್ತಿ ಸಮ್ಮಾನ್ ಕಾರ್ಯಕ್ರಮದಲ್ಲಿ ಬೆಳ್ಮಣ್‌ನ ಅನಿತಾ ಡಿಸೋಜಾ ಅವರಿಗೆ ʼಶಕ್ತಿ ಸಮ್ಮಾನ್ʼ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಅನಿತಾ ಡಿಸೋಜಾ ಅವರು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಅಲ್ಕಾ ಲಂಬಾ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಇದು ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಅಧಿಕ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾವಣೆ ಮಾಡಿರುವ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ವಿವಿಧ ರಾಜ್ಯದ ಮಹಿಳೆಯರಿಗೆ ನೀಡುವ ಅಭಿನಂದನಾ ಪ್ರಶಸ್ತಿಯಾಗಿದೆ. ಅನಿತಾ ಡಿಸೋಜಾ ಅವರು ಪ್ರಸ್ತುತ ಉಡುಪಿ ಮಹಿಳಾ ಕಾಂಗ್ರೆಸ್ ಸದಸ್ಯೆಯಾಗಿದ್ದು, ಈ ಹಿಂದೆ ಕಾರ್ಕಳ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. ಇದರೊಂದಿಗೆ ವಿವಿಧ ಸಂಘಸಂಸ್ಥೆಗಳಲ್ಲಿ ಸದಸ್ಯರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿತಾ ಡಿಸೋಜಾ ಅವರಿಗೆ ಶಕ್ತಿ ಸಮ್ಮಾನ್ ಪ್ರಶಸ್ತಿ




































