ಮಾರ್ಚ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ

ಬೆಂಗಳೂರು : ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ಕೆಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಮತ್ತು ಪ್ರಯಾಣಿಕನೊಂದಿಗೆ ನಡೆದಿದ್ದ ಗಲಾಟೆ ಪ್ರಕರಣ ತಾರಕಕ್ಕೇರಿತ್ತು. ಅಂದು ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಅಲ್ಲದೆ ಕರ್ನಾಟಕದ ಬಸ್ ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು. ಇದೀಗ ಇಂತಹ ಪುಂಡಾಟಿಕೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಕನ್ನಡಿಗರ ವಿರುದ್ಧ ದೌರ್ಜನ್ಯವೆಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್ ಘೋಷಣೆ ಮಾಡಲಾಗಿದ್ದು, ಈ ಕುರಿತು ಇಂದು ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇಂದು ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡಲು ವಾಟಾಳ್ ನಾಗರಾಜ್ ಸಭೆ ಕರೆದಿದ್ದರು. ಈ ವೇಳೆ ಹಲವು ಸಂಘಟನೆಗಳ ಮುಖಂಡರು ಸಭೆಯಲ್ಲಿ ಹಾಜರಿದ್ದರು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ, ಬಂದ್ ಮಾಡಿಯೇ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಹೊರರಾಜ್ಯ, ಸಂಸತ್ ಗಮನ ಸೆಳೆಯಲು ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮರಾಠಿ ಪುಂಡರು ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಕರ ಮುಖಕ್ಕೆ ಮಸಿ ಬಳಿಯುವುದಲ್ಲದೆ ಹಲ್ಲೆ ಕೂಡ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದ್ದಾರೆ.





























































































































error: Content is protected !!
Scroll to Top