ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ – ಪತ್ನಿ ಪ್ರತಿಮಾಳ ಜಾಮೀನು ಅರ್ಜಿ ವಜಾ

ಕಾರ್ಕಳ : ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ತಿರಸ್ಕರಿಸಿ ಮಾ. 18ರಂದು ಆದೇಶ ನೀಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

2024ರ ಅ. 20ರಂದು ಪ್ರತಿಮಾ ಪ್ರಿಯಕರ ದಿಲೀಪ್ ಹೆಗ್ಡೆಯೊಂದಿಗೆ ಸೇರಿ ತನ್ನ ಪತಿ ಬಾಲಕೃಷ್ಣ ಪೂಜಾರಿ ಅವರನ್ನು ಕೊಲೆ ಮಾಡಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ. 25ರಂದು ಅಜೆಕಾರು ಪೊಲೀಸರು ಬಂಧಿಸಿದ್ದರು. ಆರೋಪಿ ದಿಲೀಪ್ ಹೆಗ್ಡೆಯ ಜಾಮೀನು ಅರ್ಜಿಯನ್ನೂ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾ. 4ರಂದು ತಿರಸ್ಕರಿಸಿ ಆದೇಶ ನೀಡಿತ್ತು.



































































































error: Content is protected !!
Scroll to Top