ಅಬಾಕಸ್ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಮಾಳ : ಮಾಳ ಶ್ರೀಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಒಂಭತ್ತು ವಿದ್ಯಾರ್ಥಿಗಳು ಅಬಾಕಸ್ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸ್ಥಾನದಲ್ಲಿ ಅಂಕಗಳನ್ನು ಪಡೆದಿದ್ದಾರೆ. ಮಾಳ ಶಾಲೆಯಲ್ಲಿ ಅಬಾಕಸ್ ತರಗತಿಯನ್ನು ಎರಡು ವರ್ಷಗಳಿಂದ ಉಚಿತವಾಗಿ ನೀಡುತ್ತಾ ಬಂದಿರುವ ನಿರ್ದೇಶಕ ಗುರುರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ತರಗತಿಗಳನ್ನು ನಡೆಸಲಾಗುತ್ತಿದ್ದು, ಶಿಕ್ಷಕಿ ವಿಶಾಲಾಕ್ಷಿ ತರಬೇತಿಯನ್ನು ನೀಡಿರುತ್ತಾರೆ. 2024ರ ರಾಜ್ಯಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರು, ಶಾಲಾ ಸಂಚಾಲಕರು, ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಅಭಿನಂದಿಸಿರುತ್ತಾರೆ.



































































































error: Content is protected !!
Scroll to Top