ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬೆಂಗಳೂರು : ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ. 4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.
ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಬೆಲೆ ಏರಿಕೆ, ದುರಾಡಳಿತ, ಭ್ರಷ್ಟಾಚಾರ ಇತ್ಯಾದಿಗಳ ವಿರುದ್ಧದ ಹೋರಾಟದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸುತ್ತೇವೆ. ಆದರೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ಒದಗಿಸಿದ್ದಾರೆ. ಆದ್ದರಿಂದ ಈ ಹೋರಾಟದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಹೇಳಿದೆ.

































































































error: Content is protected !!
Scroll to Top