ಕಾರ್ಕಳ : ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ಮಾ. 23ರಂದು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ವಿಶ್ವನಾಥ ಎಂಬವರು ಬೈಕ್‌ನಲ್ಲಿ ಕಾರ್ಕಳ ಕಡೆಯಿಂದ ಕಾಡುಹೊಳೆಗೆ ಹೋಗುತ್ತಿರುವಾಗ ಮರ್ಣೆ ಗ್ರಾಮದ ರಾಧಾ ನಾಯಕ್ ಶಾಲೆಯ ಕ್ರಾಸ್ ಬಳಿ ಅಜೆಕಾರು ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಿಶ್ವನಾಥ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಬೈಕ್ ಜಖಂಗೊಂಡಿರುತ್ತಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು



















