ಕ್ರೈಸ್ಟ್‌ಕಿಂಗ್‌ನಲ್ಲಿ ಮಕ್ಕಳ ಬೇಸಿಗೆ ಶಿಬಿರ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಾ. 24ರಂದು ಆರಂಭಗೊಂಡು ಮಾ. 29ರವರೆಗೆ ನಡೆಯಲಿದೆ. ಮಾ. 24ರಂದು ಸಂಸ್ಥೆಯ ಸಭಾಂಗಣದಲ್ಲಿ ಶಿಬಿರದ ಉದ್ಘಾಟನಾ ಸಮಾರಂಭ ಜರುಗಿತು.
ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಎಸ್. ಆರ್‌. ಮಾತನಾಡಿ, ಮಕ್ಕಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯೊಂದಿಗೆ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಬೇಸಿಗೆ ಶಿಬಿರ ಸಹಕಾರಿಯಾಗಲಿ ಎಂದು ಅಭಿಪ್ರಾಯಪಟ್ಟರು.

ಬೆಳ್ಮಣ್‌ ಸೈಂಟ್ ಜೋಸೆಫ್ ಚರ್ಚ್‌ನ ರೆ| ಫಾ| ಅರ್ನೊಲ್ಡ್ ಮಥಾಯಿಸ್ ಮಾತನಾಡಿ, ಪ್ರತಿಯೊಂದು ವಿದ್ಯಾರ್ಥಿಯಲ್ಲಿ ವಿಭಿನ್ನವಾದ ವ್ಯಕ್ತಿತ್ವ, ವಿಶಿಷ್ಟವಾದ ಪ್ರತಿಭೆ ಅಡಗಿರುತ್ತದೆ. ಮಕ್ಕಳ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಬೇಸಿಗೆ ಶಿಬಿರ ಉತ್ತಮ ವೇದಿಕೆಯಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್‌ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ವಿವಿಧ ಚಟುವಟಿಕೆ ಆಧಾರಿತವಾದ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಮುಕ್ತ ಅವಕಾಶವಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೋ ಪ್ರಾಸ್ತಾವಿಕವಾಗಿ ಮಾತನಾಡಿ ಶಿಬಿರದ ಕುರಿತು ಮಾಹಿತಿ ನೀಡಿದರು. ಕಾಲೇಜು ವಿಭಾಗದ ಪ್ರಾಂಶುಪಾಲ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷೆ ಲಿನೆಟ್ ಮರಿನಾ ಡಿಸೋಜರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ರೂಪಾಲಿ ಶೆಟ್ಟಿ ಸ್ವಾಗತಿಸಿ, ವಿಜೇತಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಜಯಲಕ್ಷ್ಮೀ ವಂದಿಸಿದರು.



































































































error: Content is protected !!
Scroll to Top