ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಶಾಕ್-ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ

ಬೆಂಗಳೂರು : ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಸರಕಾರ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಇಂದು ಆದೇಶ ಹೊರಡಿಸಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್‌ಸಿ ತಿಳಿಸಿದೆ.

ರಾಜ್ಯದಲ್ಲಿ ದರ ಏರಿಕೆ ಸರಣಿ ಮುಂದುವರೆದಿದೆ. ಇದೀಗ ಒಂದೇ ದಿನ ಹಾಲು ಮತ್ತು ವಿದ್ಯುತ್‌ ದರ ಏರಿಕೆ ಮಾಡಿದ್ದು ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.





























































































































error: Content is protected !!
Scroll to Top