ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು : ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮಾ. 27ರಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಗೆ ಸೂಚಿಸಿದೆ. ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನದ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್​ಗೆ 2 ರೂ ಏರಿಕೆ ಮಾಡಲಾಗಿತ್ತು. ಆದ್ರೆ, ಇದೀಗ ಲೀಟರ್​ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದ್ರೆ ಇದೀಗ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ದರ ಏರಿಕೆ ವಿವರ
ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ 24 ರೂಪಾಯಿ ಇದ್ದು, ಒಂದು ಲೀಟರ್ ಹಾಲಿಗೆ 45 ರೂಪಾಯಿದೆ. ಈಗ ಹೊಸ ದರ ಜಾರಿಗೆ ಬಂದರೆ ಅರ್ಧ ಲೀಟರ್ 26 ಮತ್ತು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.
ನೀಲಿ‌ ಪ್ಯಾಕೆಟ್ ಹಾಲು – 44 ರೂ. ದಿಂದ 48 ರೂ. ಏರಿಕೆ (ಪ್ರತಿ ಲೀಟರ್​ಗೆ).
ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58 ರೂ.
ಸಮೃದ್ಧಿ ಹಾಲಿನ‌ ಪ್ಯಾಕೆಟ್: 56 ರೂ. ನಿಂದ 60 ರೂ.
ಗ್ರೀನ್ ಸ್ಪೇಷಲ್ ಹಾಲು: 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು: 52 ರೂ. ನಿಂದ 56 ರೂ.

2023ರ ಆಗಸ್ಟ್‌ನಲ್ಲಿ ಹಾಲಿನ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು. ಆಗ ದರ ಪರಿಷ್ಕರಣೆಯೊಂದಿಗೆ ಹಾಲಿನ ದರವು ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಏರಿಕೆಯಾಗಿತ್ತು. ಬಳಿಕ ರಾಜ್ಯದಲ್ಲಿ ಹಾಲು ಸಂಗ್ರಹಣೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದ ಕಾರಣಕ್ಕೆ ಕೆಎಂಎಫ್‌, 2024ರ ಜೂನ್‌ 26ರಿಂದ ಅನ್ವಯವಾಗುವಂತೆ ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ ಹೆಚ್ಚುವರಿ ಹಾಲು ವಿತರಿಸಲು ಆರಂಭಿಸಿತ್ತು. ನಂದಿನಿ ಬ್ರ್ಯಾಂಡ್‌ನ ಎಲ್ಲಾ ಮಾದರಿಯ ಹಾಲಿನ ದರದಲ್ಲಿ ಲೀಟರ್‌ಗೆ 2 ರೂ. ಹೆಚ್ಚಿಸಲಾಗಿತ್ತು. ಗ್ರಾಹಕರು ಕೊಡುವ 2 ರೂ. ಹೆಚ್ಚುವರಿ ಹಣಕ್ಕೆ ಪ್ರತಿಯಾಗಿ 50 ಎಂಎಲ್‌ ಹೆಚ್ಚುವರಿ ಹಾಲು ನೀಡಲಾಗುತ್ತಿದೆ.





























































































































error: Content is protected !!
Scroll to Top