ಪತ್ನಿಯನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಪಲಾಯನ ಮಾಡಿದ್ದ ಪತಿ ಪುಣೆಯಲ್ಲಿ ಸೆರೆ

ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿಸಿ ಪಲಾಯನ ಮಾಡಿದ್ದ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ ರಾಕೇಶ್ ಕೊಲೆ ಮಾಡಿ ಹೆಣವನ್ನು ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿಟ್ಟು ಬಳಿಕ ಹೆಂಡತಿಯ ತಾಯಿಗೆ ಫೋನ್‌ ಮಾಡಿ ತಿಳಿಸಿ ಪಲಾಯನ ಮಾಡಿದ್ದ. ಈ ಮಾದರಿಯ ಬರ್ಬರ ಹತ್ಯೆಗಳು ಈಗ ಪದೇಪದೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಾರಾಷ್ಟ್ರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಳಿಮಾವು ಮನೆಯೊಂದಲ್ಲಿ ಬಾಡಿಗೆ ಇದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ಪತಿ ಆಕೆಯ ದೇಹವನ್ನು ತುಂಡರಿಸಿ ಟ್ರಾಲಿ ಬ್ಯಾಗ್‌ನಲ್ಲಿ​​​ ತುಂಬಿಸಿಟ್ಟು ಪರಾರಿಯಾಗಿದ್ದ.
ಹುಳಿಮಾವು ಪೊಲೀಸರು ಸಿಡಿಆರ್​ ಆಧರಿಸಿ ಮಹಾರಾಷ್ಟ್ರದ ಪುಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಶೋಧಕಾರ್ಯ ನಡೆಸಿದಾಗ ರಾಕೇಶ್ ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಪುಣೆ ಪೊಲೀಸರ ವಶದಲ್ಲಿರುವ ರಾಕೇಶ್‌ನನ್ನು ಬೆಂಗಳೂರಿಗೆ ಕರೆತರಲು ಹುಳಿಮಾವು ಪೊಲೀಸರ ತಂಡ ಪುಣೆಗೆ ತೆರಳಿದೆ.







































































error: Content is protected !!
Scroll to Top