ಕೇಂದ್ರ ಸರಕಾರಿ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳಿಗೆ ಏ. 14ರಂದು ರಜೆ
ನವದೆಹಲಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನವಾದ ಏ. 14ರಂದು ಸಾರ್ವತ್ರಿಕ ರಜೆ ಘೋಷಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಕಟನೆ ಹೊರಡಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರಕಾರಿ ಕಚೇರಿಗಳಿಗೆ ಏಪ್ರಿಲ್ 14 ರಂದು ರಜೆ ಘೋಷಿಸಲು ನಿರ್ಧರಿಸಲಾಗಿದೆ. ಭಾರತ ಸರಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ.





































